ಕಝಾಕಿಸ್ತಾನದ ಅಕ್ಟೌ (Aktua) ನಗರದ ಸಮೀಪ ಅಜರ್ಬೈಜಾನ್ ಏರ್ಲೈನ್ಸ್ನ ಪ್ರಯಾಣಿಕ ವಿಮಾನ ಪತನಗೊಂಡಿದ್ದು, 67 ಪ್ರಯಾಣಿಕರಲ್ಲಿ ಕನಿಷ್ಠ 25 ಮಂದಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಅಜರ್ಬೈಜಾನ್ನ ರಾಜಧಾನಿ ಬಾಕುವಿನಿಂದ ರಷ್ಯಾದ ಗ್ರೋಜ್ನಿಗೆ (Grozny) ತೆರಳುತ್ತಿದ್ದ ಈ ವಿಮಾನ, ತಾಂತ್ರಿಕ ಸಮಸ್ಯೆ ಎದುರಿಸಿದ ಪರಿಣಾಮ ತುರ್ತು ಲ್ಯಾಂಡಿಂಗ್ ಮಾಡುವ ವೇಳೆ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿತು.
ಅಪಘಾತದಲ್ಲಿ 42ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಕ್ಷಣ ಧಾವಿಸಿ, ಬದುಕುಳಿದವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ಕಾರಣವನ್ನು ತಿಳಿದುಕೊಳ್ಳಲು ತನಿಖೆ ಮುಂದುವರೆದಿದೆ.