ಬೆಂಗಳೂರು: ಮಹಿಳಾ ಶಿಕ್ಷಣ ಮತ್ತು ಸಬಲೀಕರಣಕ್ಕೆ ಹೊಸ ಗತಿ ನೀಡಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಐದು ಮಹಿಳಾ ಪದವೀಧರರಿಗೆ ಇಂಗ್ಲೆಂಡಿನ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಪೂರ್ಣ ಅನುದಾನಿತ ವಿದ್ಯಾರ್ಥಿವೇತನವನ್ನು ಘೋಷಿಸಿದೆ. ಈ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಶನಿವಾರ ಅಧಿಕೃತವಾಗಿ ಪ್ರಾರಂಭಿಸಿದರು
ಈ ಹೊಸ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಈ ಯೋಜನೆಯಡಿ ಆಯ್ಕೆಯಾದ ಐದು ಮಹಿಳಾ ಪದವೀಧರರಿಗೆ ಯುನೈಟೆಡ್ ಕಿಂಗ್ಡಮ್ನ ಪ್ರಖ್ಯಾತ ವಿಶ್ವವಿದ್ಯಾಲಯಗಳಲ್ಲಿ ಪಿಜಿ ಅಥವಾ ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶ ನೀಡಲಾಗುತ್ತದೆ. ವಿದ್ಯಾರ್ಥಿವೇತನವು ಪ್ರವಾಸ ವೆಚ್ಚ, ವಸತಿ, ಬೋಧನಾ ಶುಲ್ಕ, ಮತ್ತು ದಿನನಿತ್ಯದ ಜೀವನೋಪಾಯ ವೆಚ್ಚವನ್ನು ಸಂಪೂರ್ಣವಾಗಿ ಒಳಗೊಂಡಿರುತ್ತದೆ. ಈ ಯೋಜನೆ ಶಿಕ್ಷಣದ ಮೂಲಭೂತ ಹಕ್ಕು ಮತ್ತು ಮಹಿಳಾ ಸಬಲೀಕರಣಕ್ಕೆ ನೂತನ ಆಯಾಮ ನೀಡಲು ಸರಕಾರದ ಉದ್ದೇಶವಾಗಿದೆ
ಅರ್ಹತಾ ಮಾನದಂಡಗಳು
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು
ಕನಿಷ್ಠ ಪದವೀಧರ ಪದವಿ ಉತ್ತಮ ಶ್ರೇಣಿಯೊಂದಿಗೆ ಹೊಂದಿರಬೇಕು
ಸಾಮಾಜಿಕ ಸೇವೆ, ನಾಯಕತ್ವ ಗುಣಗಳು ಮತ್ತು ಉನ್ನತ ಶಿಕ್ಷಣದ ಕನಸುಗಳನ್ನು ಹೊಂದಿರುವ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯುತ್ತದೆ.
ಅರ್ಜಿಗಳನ್ನು ಪರಿಶೀಲಿಸಿದ ನಂತರ, ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಅಂತಿಮ ಆಯ್ಕೆಯನ್ನು ತಜ್ಞರ ಸಮಿತಿಯ ಮೂಲಕ ನಿರ್ಧರಿಸಲಾಗುತ್ತದೆ
ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಮಾತನಾಡಿ, ಈ ಅಂತರರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿನಿಯರು ಪ್ರಥಮ ಆದ್ಯತೆಯ ಪರಿಗಣನೆಯನ್ನು ಪಡೆಯಲಿದ್ದು. “ಮುಂದಿನ ಮೂರು ವರ್ಷಗಳಲ್ಲಿ, 15 ವಿದ್ಯಾರ್ಥಿಗಳು ಯುಕೆ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅವಕಾಶವನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.
ರಾಜ್ಯ ಸರ್ಕಾರವು ಒಂದು ವರ್ಷದ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಪ್ರತಿ ವಿದ್ಯಾರ್ಥಿಗೆ ರೂ 20 ಲಕ್ಷವನ್ನು ನೀಡಲಿದೆ. ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಸರಕಾರದ ವೆಬ್ಸೈಟ್ ನಲ್ಲಿ ತಿಳಿದುಕೊಳ್ಳಬಹುದು.